alex Certify ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್: ಮಾಜಿ ಶಾಸಕರ ಬೆಂಬಲ ಕೋರಿದ ಜೆಡಿಎಸ್ ಅಭ್ಯರ್ಥಿ ರಘು ಆಚಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್: ಮಾಜಿ ಶಾಸಕರ ಬೆಂಬಲ ಕೋರಿದ ಜೆಡಿಎಸ್ ಅಭ್ಯರ್ಥಿ ರಘು ಆಚಾರ್

ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ರಘು ಆಚಾರ್ ಚಿತ್ರದುರ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

ಇದೇ ವೇಳೆ ಅವರು ಮಾಜಿ ಶಾಸಕ ಎಸ್.ಕೆ. ಬಸವರಾಜನ್ ನಿವಾಸಕ್ಕೆ ಭೇಟಿ ನೀಡಿ ಜೆಡಿಎಸ್ ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಹೊಸದುರ್ಗ ಇಲ್ಲವೇ ಹಿರಿಯೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಬಸವರಾಜನ್ ಅವರಿಗೆ ರಘು ಆಚಾರ್ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಭೇಟಿಯ ನಂತರ ಮಾತನಾಡಿದ ರಘು ಆಚಾರ್, ಚಿತ್ರದುರ್ಗದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ಬೆಂಬಲ ನೀಡುವಂತೆ ಬಸವರಾಜನ್ ಅವರಿಗೆ ಮನವಿ ಮಾಡಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅಖಿಲ ಕರ್ನಾಟಕ ರಘು ಆಚಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ದೋರನಹಳ್ಳಿ ಮಹೇಶ್, ಕಾಂಗ್ರೆಸ್ ಪಕ್ಷ ರಘು ಆಚಾರ್ ಅವರಿಗೆ ಟಿಕೆಟ್ ನೀಡದೆ ವಂಚಿಸಿರುವುದು ಸಮುದಾಯಕ್ಕೆ ಬಗೆದ ದ್ರೋಹವಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹಿಷ್ಕರಿಸುವಂತೆ ಸಮುದಾಯದವರಿಗೆ ಕರೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...