ಬೆಂಗಳೂರು: ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ಅಧಿಕಾರ ಸ್ವೀಕರಿಸಿದ್ದಾರೆ.
ಪರಿಷತ್ ಸಭಾಪತಿಯಾಗಿದ್ದ ಬಸವರಾಜ್ ಹೊರಟ್ಟಿ ರಾಜೀನಾಮೆ ಘೋಷಿಸಿರುವ ಹಿನ್ನೆಲೆಯಲ್ಲಿ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ಅವರನ್ನು ನೇಮಕ ಮಾಡಲಾಗಿದೆ.
ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ರಘುನಾಥ್ ಮಲ್ಕಾಪುರೆ ರಾಜ್ಯಪಾಲರ ಸೂಚನೆ ಮೇರೆಗೆ ಹಂಗಾಮಿ ಸಭಾಪತಿಯಾಗಿ ಅಧಿಕಾರ ಸ್ವೀಕರಿಸಿದ್ದೇನೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದರು.