
ಉಡುಪಿ: ಜೂನ್ 7 ರ ನಂತರ ಸಂಪೂರ್ಣ ಲಾಕ್ ಡೌನ್ ಅಗತ್ಯವಿಲ್ಲ. ಉಡುಪಿಯಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗಿದೆ ಎಂದು ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇಕಡ 18 ರಿಂದ 19 ರಷ್ಟು ಇದೆ. ಜೂನ್ 7 ರವರೆಗೆ ಪಾಸಿಟಿವಿಟಿ ದರ ಶೇಕಡ 10 ರಷ್ಟಾಗಬೇಕು. ಜಿಲ್ಲೆಯಲ್ಲಿ ಲಾಕ್ಡೌನ್ ಮುಂದುವರೆಸಿದರೆ ಯಾವುದೇ ಪ್ರಯೋಜನವಿಲ್ಲ. ಪಾಸಿಟಿವಿಟಿ ದರ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ವಿಸ್ತರಿಸಬಹುದು ಎಂದು ಹೇಳಿದ್ದಾರೆ.