alex Certify ದುಷ್ಕರ್ಮಿಗಳಿಂದ ದಾಳಿಗೊಳಗಾದ ಚನ್ನಗಿರಿ ಪೊಲೀಸ್ ಠಾಣೆಗೆ ರಘುಪತಿ ಭಟ್ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಷ್ಕರ್ಮಿಗಳಿಂದ ದಾಳಿಗೊಳಗಾದ ಚನ್ನಗಿರಿ ಪೊಲೀಸ್ ಠಾಣೆಗೆ ರಘುಪತಿ ಭಟ್ ಭೇಟಿ

ದಾವಣಗೆರೆ: ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಲಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಗೆ ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು‌ ಇಂದು ಭೇಟಿ ನೀಡಿ ಘಟನೆಯ ವಿವರ ಪಡೆದು ಪೊಲೀಸರಿಗೆ ಮಾನಸಿಕ ಸ್ಥೈರ್ಯ ತುಂಬಿದ್ದಾರೆ.

ಮೇ 24 ರಂದು ಚನ್ನಗಿರಿ ಪೊಲೀಸ್ ಠಾಣೆಗೆ ಉದ್ರಿಕ್ತರ ಗುಂಪು ತಡರಾತ್ರಿ ಕಲ್ಲು ತೂರಾಟ ನಡೆಸಿದ್ದರು. ಇದರಲ್ಲಿ ಕೆಲವು ಮಂದಿ ಪೊಲೀಸರು ಗಾಯಗೊಂಡಿದ್ದರು. ಪೊಲೀಸರಿಗೆ ಆತ್ಮಸ್ಥೈರ್ಯ ತುಂಬಿ ದುಷ್ಕೃತ್ಯ ನಡೆಸಿದವರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ಸರ್ಕಾರ ಪೊಲೀಸ್ ಅಧಿಕಾರಿಗಳನ್ನೆ ಅಮಾನತುಗೊಳಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಠಾಣೆ ಮೇಲೆ ದಾಳಿ ಕೃತ್ಯದಲ್ಲಿ ಭಾಗಿಯಾದ ಎಲ್ಲಾ ದುಷ್ಕೃರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಬೇಕು ಎಂದು ರಘುಪತಿ ಭಟ್ ಅವರು ಒತ್ತಾಯಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...