
ಚಿತ್ರದುರ್ಗ: 2022-23ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ರಾಗಿ ಖರೀದಿ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.
ರಾಜ್ಯದ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಗಿ ಖರೀದಿ ಪ್ರಕ್ರಿಯೆಯು ಇದೇ ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳಬೇಕಾಗಿರುತ್ತದೆ. ಆದರೆ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಗುರಿಯನ್ನು ತಲುಪದೇ ಇರುವ ಕಾರಣ ಕೇಂದ್ರ ಸರ್ಕಾರವು ರಾಜ್ಯದ ರೈತರ ಹಿತದೃಷ್ಠಿಯಿಂದ ಈಗಾಗಲೇ ರಾಗಿಯನ್ನು ಮಾರಾಟ ಮಾಡಲು ನೋಂದಣಿ ಮಾಡಿಕೊಂಡಿರುವ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಿದೆ ಹಾಗೂ ರಾಗಿ ಖರೀದಿ ಕಾರ್ಯವನ್ನು ಏಪ್ರಿಲ್ 30 ರೊಳಗಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ರೈತಭಾಂದವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.