ಚಿಕ್ಕಮಗಳೂರು: ರಾಗಿ ಮುದ್ದೆ, ಅನ್ನ ಸೇವಿಸಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಡ್ಡಪಟ್ಟಣಗೆರೆಯಲ್ಲಿ ಘಟನೆ ನಡೆದಿದೆ.
ಎರಡು ದಿನದ ಹಿಂದೆ ಮನೆಯಲ್ಲಿ ಊಟ ಮಾಡಿದ ಮೂವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತೀವ್ರ ಹೊಟ್ಟೆ ನೋವಿನಿಂದ ದೊಡ್ಡಯಲ್ಲಪ್ಪ(75) ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ 50 ವರ್ಷದ ಯಲ್ಲಮ್ಮ ಮೃತಪಟ್ಟಿದ್ದಾರೆ. ಇಬ್ಬರೂ ಹಕ್ಕಿಪಿಕ್ಕಿ ಜನಾಂಗಕ್ಕೆ ಸೇರಿದವರು. ಹೊಟ್ಟೆಯಲ್ಲಿ ನೋವಿನಿಂದ ಬಳಲುತ್ತಿದ್ದ ಮತ್ತೊಬ್ಬರಿಗೆ ಚಿಕಿತ್ಸೆ ಮುಂದುವರೆದಿದೆ. ಕಡೂರು ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.