
ಬೆಂಗಳೂರು: ಜೋಳ, ರಾಗಿ, ತೊಗರಿಗೆ ಕನಿಷ್ಠ ಬೆಂಬಲ ನಿಗದಿ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವ ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ರಚಿಸಲಾಗಿರುವ ಸಚಿವ ಸಂಪುಟ ಉಪಸಮಿತಿ ಸಭೆಯ ನಂತರ ರಾಜಣ್ಣ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ.
ತೊಗರಿಗೆ ಕೇಂದ್ರ ಸರ್ಕಾರದ 7550 ರೂ. ಬೆಂಬಲ ಬೆಲೆ ನಿಗದಿಪಡಿಸಿದ್ದು, ಇದಕ್ಕೆ 450 ರೂಪಾಯಿ ಹೆಚ್ಚುವರಿ ನೀಡಿ ರಾಜ್ಯ ಸರ್ಕಾರ ಖರೀದಿಸುತ್ತಿದೆ. ರಾಗಿ ಖರೀದಿಯನ್ನು 20 ಕ್ವಿಂಟಲ್ ನಿಂದ 30 ಕ್ವಿಂಟಲ್ ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.