ಬೆಂಗಳೂರು: ಸ್ಯಾಂಡಲ್ ವುಡ್ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಕಾಲಿಗೆ ಗಾಯವಾಗಿದೆ. ಬೆಂಗಳೂರು ಸ್ಟುಡಿಯೋಸ್ ನಲ್ಲಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ.
‘ಮದನಿಕ’ ಚಿತ್ರದ ಶೂಟಿಂಗ್ ವೇಳೆ ರಾಗಿಣಿ ಕಾಲಿಗೆ ಗಾಯವಾಗಿದೆ. ಕನ್ನಡ, ತೆಲುಗು ಭಾಷೆಯಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಬೆಂಗಳೂರಿನಲ್ಲಿ ಚಿತ್ರೀಕರಣದ ಸಂದರ್ಭದಲ್ಲಿ ರಾಗಿಣಿ ಅವರಿಗೆ ಗಾಯವಾಗಿದೆ.
ಗಂಭೀರ ಸಮಸ್ಯೆ ಏನೂ ಇಲ್ಲ ಎಂದು ವೈದ್ಯರು ಹೇಳಿದ್ದು, ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ರಾಗಿಣಿ ಗಾಯಗೊಂಡ ಹಿನ್ನಲೆಯಲ್ಲಿ ಚಿತ್ರೀಕರಣ ಮುಂದೂಡಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.