ಮಂಗಳೂರು: ಇಂದಿರಾ ಕ್ಯಾಂಟೀನ್ ಗಳಲ್ಲಿ ಜಿಲ್ಲಾವಾರು ಮೆನು ಸಿದ್ಧಪಡಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ.
ಸ್ಥಳೀಯರ ಬೇಡಿಕೆಯಂತೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಆಹಾರ ಒದಗಿಸಲು ಜಿಲ್ಲಾವಾರು ಮೆನು ಸಿದ್ಧಪಡಿಸಲಾಗುವುದು. ಉಳ್ಳಾಲದ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಪರಿಶೀಲಿಸಿದ್ದು, ಇಲ್ಲಿನ ಆಹಾರ ನಮಗೆ ಒಗ್ಗುತ್ತಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಬೇರೆ ಕಡೆಯಲ್ಲಿಯೂ ಇದೆ ರೀತಿ ದೂರುಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯರ ಬೇಡಿಕೆಗೆ ಅನುಗುಣವಾಗಿ ಇಂದಿರಾ ಕ್ಯಾಂಟೀನ್ ಗಳಲ್ಲಿ ಜಿಲ್ಲಾವಾರು ಆಹಾರ ಪಟ್ಟಿ ಸಿದ್ಧಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲಾಗುವುದು. ಜನರಿಗೆ ಅನುಕೂಲವಾಗುವಂತಹ ಸರ್ಕಾರಿ ಆಸ್ಪತ್ರೆ, ಬಸ್ ನಿಲ್ದಾಣ, ಮಾರುಕಟ್ಟೆ ಪ್ರದೇಶಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.