alex Certify ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಗುಡ್ ನ್ಯೂಸ್: ಸ್ಥಳೀಯರ ಬೇಡಿಕೆಯಂತೆ ಜಿಲ್ಲಾವಾರು ಮೆನು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಗುಡ್ ನ್ಯೂಸ್: ಸ್ಥಳೀಯರ ಬೇಡಿಕೆಯಂತೆ ಜಿಲ್ಲಾವಾರು ಮೆನು

ಮಂಗಳೂರು: ಇಂದಿರಾ ಕ್ಯಾಂಟೀನ್ ಗಳಲ್ಲಿ ಜಿಲ್ಲಾವಾರು ಮೆನು ಸಿದ್ಧಪಡಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ.

ಸ್ಥಳೀಯರ ಬೇಡಿಕೆಯಂತೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಆಹಾರ ಒದಗಿಸಲು ಜಿಲ್ಲಾವಾರು ಮೆನು ಸಿದ್ಧಪಡಿಸಲಾಗುವುದು. ಉಳ್ಳಾಲದ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಪರಿಶೀಲಿಸಿದ್ದು, ಇಲ್ಲಿನ ಆಹಾರ ನಮಗೆ ಒಗ್ಗುತ್ತಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಬೇರೆ ಕಡೆಯಲ್ಲಿಯೂ ಇದೆ ರೀತಿ ದೂರುಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯರ ಬೇಡಿಕೆಗೆ ಅನುಗುಣವಾಗಿ ಇಂದಿರಾ ಕ್ಯಾಂಟೀನ್ ಗಳಲ್ಲಿ ಜಿಲ್ಲಾವಾರು ಆಹಾರ ಪಟ್ಟಿ ಸಿದ್ಧಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲಾಗುವುದು. ಜನರಿಗೆ ಅನುಕೂಲವಾಗುವಂತಹ ಸರ್ಕಾರಿ ಆಸ್ಪತ್ರೆ, ಬಸ್ ನಿಲ್ದಾಣ, ಮಾರುಕಟ್ಟೆ ಪ್ರದೇಶಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...