ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಭಾರತೀಯ ಕ್ರಿಕೆಟ್ ಟೀಂ ಮುಖ್ಯ ಕೋಚ್ ಆಗಿ ಅಧಿಕೃತವಾಗಿ ಆಯ್ಕೆಯಾಗಿಲ್ಲ. ಸುಲಕ್ಷಣ ನಾಯಕ್, ಆರ್ಪಿ ಸಿಂಗ್ರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ ರಾಹುಲ್ ದ್ರಾವಿಡ್ರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಿಸಿದೆ. ಮುಂಬರುವ ನ್ಯೂಜಿಲೆಂಡ್ ಸರಣಿಯಿಂದ ರಾಹುಲ್ ದ್ರಾವಿಡ್ ಟೀಂ ಇಂಡಿಯಾಗೆ ಮಾರ್ಗದರ್ಶನ ನೀಡಲಿದ್ದಾರೆ.
ಇನ್ನು ಈ ವಿಚಾರವಾಗಿ ಪ್ರತಿಕ್ರಿಯಿಸಿದ ರಾಹುಲ್ ದ್ರಾವಿಡ್, ಭಾರತೀಯ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ಆಗಿ ಆಯ್ಕೆಯಾಗಿರೋದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. ಈ ಹುದ್ದೆಯನ್ನು ನಿರ್ವಹಿಸಲು ನಾನು ಕಾತುರನಾಗಿದ್ದೇನೆ ಎಂದು ಹೇಳಿದ್ದಾರೆ.
ಶಾಸ್ತ್ರಿ ಮುಂದಾಳತ್ವದಲ್ಲಿ ತಂಡವು ಉತ್ತಮ ಸಾಧನೆ ಮಾಡಿದೆ. ಟೀಂ ಇಂಡಿಯಾವನ್ನು ಮುನ್ನಡೆಸುವತ್ತ ನಾನು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಿದ್ದೇನೆ. ಟೀಂ ಇಂಡಿಯಾದ ಅನೇಕ ಆಟಗಾರರ ಜೊತೆ ಈಗಾಗಲೇ ಸಾಕಷ್ಟು ರೀತಿಯಲ್ಲಿ ಕೆಲಸ ಮಾಡಿದ್ದೇನೆ. ಇವರಿಗೆಲ್ಲ ಕೆಲಸದ ಬಗ್ಗೆ ನಿಷ್ಠೆ ಹಾಗೂ ಪ್ರತಿದಿನ ಏನನ್ನಾದರೂ ಕಲಿಯಬೇಕು ಎಂಬ ಹಂಬಲವನ್ನು ಟೀಂ ಇಂಡಿಯಾ ಆಟಗಾರರಲ್ಲಿ ಕಂಡಿದ್ದೇನೆ. ಈ ಆಟಗಾರರ ಜೊತೆ ಕೆಲಸ ಮಾಡಲು ನಾನು ಕಾತುರನಾಗಿದ್ದೇನೆ ಎಂದಿದ್ದಾರೆ.
ದ್ರಾವಿಡ್ರನ್ನು ತಂಡದ ಮುಖ್ಯ ಕೋಚ್ ಆಗಿ ಸ್ವಾಗತಿಸುತ್ತಾ ಮಾತನಾಡಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಟೀಂ ಇಂಡಿಯಾ ಕಂಡ ಅತ್ಯುತ್ತಮ ಆಟಗಾರರಲ್ಲಿ ರಾಹುಲ್ ದ್ರಾವಿಡ್ ಸಹ ಒಬ್ಬರು. ನ್ಯಾಷನಲ್ ಕ್ರಿಕೆಟ್ ಅಕಾಡಮಿಯ ಮುಖ್ಯಸ್ಥರಾಗಿಯೂ ಅವರು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ ಎಂದು ಹೇಳಿದ್ರು.