ನವದೆಹಲಿ: ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿ ಅವರಿಗೆ ಸೂಚನೆ ನೀಡಲಾಗಿದೆ.
ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಯವರಿಗೆ ಲೋಕಸಭಾ ಹೌಸಿಂಗ್ ಕಮಿಟಿಯಿಂದ ನೋಟಿಸ್ ನೀಡಲಾಗಿದೆ. ಮೋದಿ ಹೆಸರಿನ ಕುರಿತಾಗಿ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿದ್ದ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ, ಹೀಗಾಗಿ ಸರ್ಕಾರಿ ಬಂಗಲೆ ತೊರೆಯುವಂತೆ ಲೋಕಸಭಾ ಹೌಸಿಂಗ್ ಕಮಿಟಿಯಿಂದ ಅವರಿಗೆ ನೋಟಿಸ್ ನೀಡಲಾಗಿದೆ.
2004 ರಲ್ಲಿ ಲೋಕಸಭೆಯ ಸದಸ್ಯರಾಗಿ ಆಯ್ಕೆಯಾದ ನಂತರ ಗಾಂಧಿ ಅವರಿಗೆ 12, ತುಘಲಕ್ ಲೇನ್‌ನಲ್ಲಿರುವ ಬಂಗಲೆಯನ್ನು ನೀಡಲಾಗಿತ್ತು. ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಾರೋಪಣೆ ಮಾಡಿದ್ದರಿಂದ ಸೂರತ್‌ನ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಇದರ ಪರಿಣಾಮವಾಗಿ ಲೋಕಸಭಾ ಸೆಕ್ರೆಟರಿಯೇಟ್ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿತು, ಲೋಕಸಭೆಯಿಂದ ಅನರ್ಹಗೊಂಡ ನಂತರ ಇದೀಗ ಲೋಕಸಭೆಯ ವಸತಿ ಸಮಿತಿಯು ಸರ್ಕಾರ ಮಂಜೂರು ಮಾಡಿದ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ನೀಡಿದೆ.