alex Certify ರಾಹುಲ್ ಗಾಂಧಿ ಬಿಜೆಪಿ ಸ್ಟಾರ್ ಪ್ರಚಾರಕ: ಯತ್ನಾಳ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಹುಲ್ ಗಾಂಧಿ ಬಿಜೆಪಿ ಸ್ಟಾರ್ ಪ್ರಚಾರಕ: ಯತ್ನಾಳ್

ವಿಜಯಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಜಯಪುರ ನಗರಕ್ಕೆ ಪ್ರಚಾರಕ್ಕೆ ಬಂದರೆ ಬಿಜೆಪಿಗೆ ಅನುಕೂಲವಾಗುತ್ತದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಪರ ಪ್ರಚಾರ ಮಾಡಿದರೆ ನಾನು 50,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ.

ರಾಹುಲ್ ಗಾಂಧಿ ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲ ಕಾಂಗ್ರೆಸ್ ಅವಸಾನವಾಗುತ್ತದೆ ಎಂದು ವ್ಯಂಗ್ಯವಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿಯ ಸ್ಟಾರ್ ಪ್ರಚಾರಕರು. ಅವರು ಪ್ರಚಾರ ಮಾಡಿದಷ್ಟು ಬಿಜೆಪಿಗೆ ದೊಡ್ಡ ಲಾಭವಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...