ದೆಹಲಿಯಿಂದ ಬೆಂಗಳೂರಿಗೆ ಹೊರಟ ರಾಹುಲ್ ಗಾಂಧಿ: ಕೋರ್ಟ್ ಗೆ ಹಾಜರು, ನಾಯಕರೊಂದಿಗೆ ಸಭೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ಅವರು ಬೆಂಗಳೂರಿಗೆ ತೆರಳಲಿದ್ದಾರೆ

ವಿಮಾನ ನಿಲ್ದಾಣ ತಲುಪಿದ ರಾಹುಲ್ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯವಾಹಿನಿಯ ಪತ್ರಿಕೆಗಳಲ್ಲಿ ಅವಹೇಳನಕಾರಿ ಜಾಹೀರಾತು ಪ್ರಕಟಿಸಿದ್ದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಜೂನ್ 7 ರಂದು ರಾಹುಲ್ ಗಾಂಧಿಯವರಿಗೆ ಹಾಜರಾಗುವಂತೆ ಕೋರ್ಟ್ ಹೇಳಿದೆ.

ಹೀಗಾಗಿ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿ ಕೋರ್ಟ್ ಗೆ ಹಾಜರಾಗಲಿದ್ದಾರೆ. ನಂತ ಕಾಂಗ್ರೆಸ್ ನಾಯಕರು, ಲೋಕಸಭೆ ಚುನಾವಣೆಯಲ್ಲಿ ಆಯ್ಕೆಯಾಗಿರುವ ಸಂಸದರು, ಪರಾಭವಗೊಂಡ ಅಭ್ಯರ್ಥಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read