ಮೋದಿ ಉಪನಾಮದ ಕಾರಣಕ್ಕೆ ಸೂರತ್ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ತಮ್ಮ ಸಂಸತ್ ಸದಸ್ಯತ್ವವನ್ನು ಕಳೆದುಕೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಬಳಿಕ ತಮ್ಮ ಸಂಸತ್ ಸದಸ್ಯತ್ವವನ್ನು ಮರಳಿ ಪಡೆದುಕೊಂಡಿದ್ದಾರೆ.
ಬುಧವಾರದಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮಣಿಪುರದಲ್ಲಿ ಭಾರತಮಾತೆಯ ಕಗ್ಗೊಲೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣನಿಗೆ ಹೋಲಿಕೆ ಮಾಡಿದ ರಾಹುಲ್ ಗಾಂಧಿ, ನೀವು ನಿಜವಾದ ದೇಶಭಕ್ತರಲ್ಲ, ದೇಶದ್ರೋಹಿಗಳು ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ನೀಡಿರುವ ವಿಚಾರ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದು, ಅವರ ವಿರುದ್ಧ ಸ್ಪೀಕರ್ ಬಳಿ ದೂರು ನೀಡಲಾಗಿದೆ.