ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರ ಚುನಾವಣೆ ಆಯೋಗ ನಿನ್ನೆಯಷ್ಟೇ ಚುನಾವಣೆ ದಿನಾಂಕ ಘೋಷಿಸಿದೆ.
5 ರಾಜ್ಯಗಳ ಚುನಾವಣೆ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕರ ಅಸಮಾಧಾನ ಸ್ಪೋಟಗೊಂಡಿದೆ. ಇಂದು ಜಮ್ಮುವಿನಲ್ಲಿ ಹಿರಿಯ ನಾಯಕರ ಮಹತ್ವದ ಸಭೆ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಜಮ್ಮುವಿಗೆ ತೆರಳಲಿದ್ದಾರೆ. ಗಾಂಧಿ ಕುಟುಂಬಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಲಿದ್ದಾರೆ.
ಜಮ್ಮುವಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಆನಂದ್ ಶರ್ಮಾ, ಕಪಿಲ್ ಸಿಬಲ್, ಗುಲಾಮ್ ನಬಿ ಆಜಾದ್, ಭೂಪಿಂದರ್ ಸಿಂಗ್ ಹೂಡಾ, ವಿವೇಕ್ ತನ್ಕಾ, ರಾಜ್ ಬಬ್ಬರ್ ಮೊದಲಾದ ನಾಯಕರು ಸಭೆ ಸೇರುವ ಸಾಧ್ಯತೆ ಇದೆ.
ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಜ್ಯಸಭೆಯ ವಿಪಕ್ಷ ನಾಯಕ ಸ್ಥಾನ ನೀಡಿದ ಹಿನ್ನೆಲೆಯಲ್ಲಿ ಅವರ ನೇಮಕಕ್ಕೆ ಹಿರಿಯ ನಾಯಕರು ಅಸಮಾಧಾನ ಹೊಂದಿದ್ದಾರೆ. ಈ ಹುದ್ದೆಯ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದರು. ಪಕ್ಷದ ಬೆಳವಣಿಗೆಗಳ ಬಗ್ಗೆ ಜಮ್ಮುವಿನಲ್ಲಿ ಹಿರಿಯ ನಾಯಕರು ಚರ್ಚೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ತಮಿಳುನಾಡಿಗೆ ತೆರಳಿದ್ದು ತಮಿಳುನಾಡಿನಲ್ಲಿರುವ ರಾಹುಲ್ ಗಾಂಧಿಗೆ ಜಮ್ಮುವಿನಿಂದ ಸಂದೇಶ ರವಾನಿಸಲಾಗುವುದು ಎಂದು ಹೇಳಲಾಗಿದೆ.