ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಕುರಿತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕ್ರಮದ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ.
ಭಾರತದ ಧ್ವನಿಗಾಗಿ ಎಷ್ಟೇ ಬೆಲೆ ತೆರಬೇಕಾದರೂ ತನ್ನ ಹೋರಾಟವನ್ನು ಮುಂದುವರಿಸುವುದಾಗಿ ರಾಹುಲ್ ಗಾಂಧಿ ಹೇಳಿದ ಬೆನ್ನಲ್ಲೇ ಇಂತಹ ಹೇಳಿಕೆ ನೀಡಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಪಕ್ಷದ ಹಿರಿಯ ನಾಯಕ ಸಭೆಯಲ್ಲಿ ದೇಶಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಕಾಂಗ್ರೆಸ್ ಹಿರಿಯ ನಾಯಕ ಅಭಿಷೇಕ್ ಸಿಂಘ್ವಿ, ಈ ಕ್ರಮ ಬಿಜೆಪಿಯ ರಾಜಕೀಯ ದ್ವೇಷವಲ್ಲದೆ ಮತ್ತೇನೂ ಅಲ್ಲ ಎಂದು ಹೇಳಿದರು.