ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಕೇಸ್ ರದ್ದು ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಕೀಲ ನಿಶಿತ್ ಕುಮಾರ್ ಶೆಟ್ಟಿ ಅವರ ಮೂಲಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಇಂದು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ನಿಗದಿಪಡಿಸಿದೆ. ಬಿಜೆಪಿ ಸರ್ಕಾರದ ವಿರುದ್ಧ ಕರಪ್ಷನ್ ರೇಟ್ ಕಾರ್ಡ್ ಜಾಹೀರಾತು ನೀಡಿದ್ದು, ಕಾಂಗ್ರೆಸ್ ಪಕ್ಷದ ಜಾಹೀರಾತನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯ ಕೇಶವ ಪ್ರಸಾದ್ ಕೇಸ್ ದಾಖಲಿಸಿದ್ದರು. ಮಾನನಷ್ಟ ಮೊಕದ್ದಮೆ ರದ್ದು ಮಾಡುವಂತೆ ರಾಹುಲ್ ಗಾಂಧಿ ಕೋರಿದ್ದಾರೆ.