ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಬೆಳಗ್ಗೆ ಹರಿಯಾಣದ ಸೋನಿಪತ್ನ ಮದೀನಾ ಗ್ರಾಮದಲ್ಲಿ ಭತ್ತದ ನಾಟಿ ಮಾಡುತ್ತಿದ್ದ ರೈತರಿಗೆ ಸಹಾಯ ಮಾಡಿದ್ದಾರೆ. ಹಿಮಾಚಲ ಪ್ರದೇಶಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭತ್ತದ ಗದ್ದೆಯೊಂದರಲ್ಲಿ ರೈತರಿಗೆ ಸಹಾಯ ಮಾಡಲು ಗದ್ದೆಗೆ ಇಳಿದಿದ್ದಾರೆ.
ಗದ್ದೆಯೊಂದರಲ್ಲಿ ಭತ್ತ ನಾಟಿಯಾಗುತ್ತಿರುವುದನ್ನು ಕಂಡ ಕಾಂಗ್ರೆಸ್ ಮುಖಂಡ ಕಾರನ್ನು ನಿಲ್ಲಿಸಿದರು. ಹೊಲಕ್ಕೆ ತೆರಳಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿ ರೈತರೊಂದಿಗೆ ಸೇರಿ ಭತ್ತ ನಾಟಿ ಮಾಡಿದರು.ಹೊಲದಲ್ಲಿ ರೈತರು, ಕೂಲಿಕಾರರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸುತ್ತಿದ್ದ ದೃಶ್ಯವೂ ಕಂಡುಬಂತು.
2024ರ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ರಾಹುಲ್ ಗಾಂಧಿ ಸಮಾಜದಲ್ಲಿ ವಿವಿಧ ಹಂತದ ಜನರೊಂದಿಗೆ ಬೆರೆಯುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಅವರು, ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಮೆಕ್ಯಾನಿಕಲ್ ಕಾರ್ಯಾಗಾರಕ್ಕೆ ಭೇಟಿ ನೀಡಿದ್ದರು . ವರ್ಕ್ಶಾಪ್ನಲ್ಲಿ ರಾಹುಲ್ ಗಾಂಧಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದರು. ಇದು ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.