ನವದೆಹಲಿ: ಲಂಚ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದ ನ್ಯೂಯಾರ್ಕ್ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಅದಾನಿಯನ್ನು ತಕ್ಷಣ ಬಂಧಿಸಿ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ರಾಹುಲ್ ಗಾಂಧಿ, ಗೌತಮ್ ಅದಾನಿಯನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ. ಅದಾನಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ನ್ಯೂಯಾರ್ಕ್ ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಆದಾಗ್ಯೂ ಅದಾನಿಯನ್ನು ಕೇಂದ್ರ ಸರ್ಕಾರ ರಕ್ಷಣೆ ಮಾಡುತ್ತಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ-ಸೆಬಿ ಅಧ್ಯಕ್ಷೆ ಹಾಗೂ ಅದಾನಿಯನ್ನು ರಕ್ಷಿಸುತ್ತಿರುವ ಮಾಧಬಿ ಪುರಿ ಬುಚ್ ಅವರನ್ನು ಸ್ಥಾನದಿಂದ ವಜಾಗೊಳಿಸಬೇಕು. ಇಬ್ಬರನ್ನೂ ತನಿಖೆಗೆ ಒಳಪಡಿಸಬೇಕು ಎಂದರು.
ಪ್ರಕರನದ ತನಿಖೆಗೆ ಜಂಟಿ ಸದನ ಸಮಿತಿ ರಚಿಸಬೇಕು. ಸೋಮವಾರದಿಂದ ಆರಂಭವಾಗಲಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಅದಾನಿ ವಿಚಾರ ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.