
ಬೆಂಗಳೂರು: ಏಪ್ರಿಲ್ 5 ರಂದು ಕೋಲಾರದಲ್ಲಿ ಕಾಂಗ್ರೆಸ್ ಸತ್ಯಮೇವ ಜಯತೆ ಸಮಾವೇಶ ನಡೆಯಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ.
ಈ ಹಿಂದೆ ಕೋಲಾರದಲ್ಲಿ ರಾಹುಲ್ ಗಾಂಧಿ ಭಾಷಣ ಮಾಡಿದ್ದರು. ಕೋಲಾರ ಭಾಷಣದಿಂದ ಅವರನ್ನು ಅನರ್ಹ ಮಾಡಲಾಗಿದೆ. ಈಗ ಅದೇ ಕೋಲಾರದಿಂದ ಮತ್ತೆ ಹೋರಾಟ ಆರಂಭಿಸಲಿದ್ದಾರೆ. ವಿಧಾನಸಭೆ ಚುನಾವಣೆಗೆ ಕೋಲಾರದಿಂದ ರಾಹುಲ್ ಗಾಂಧಿ ರಣಕಹಳೆ ಮೊಳಗಿಸಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೋಲಾರದಲ್ಲಿ ನಡೆಯುವ ಸತ್ಯಮೇವ ಜಯತೇ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.