
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ.
ಗುರುವಾರ ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಚುನಾವಣೆ ಪ್ರಚಾರ ನಡೆಸಲಿದ್ದಾರೆ.
ಮಧ್ಯಾಹ್ನ 2:30ಕ್ಕೆ ರಾಯಚೂರಿಗೆ ತೆರಳಲಿದ್ದು ಬಹಿರಂಗ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿ ಅವರೊಂದಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ. ಮೇ 7ರಂದು ಈ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.