alex Certify ಬಿಜೆಪಿಯವರು ರಾಹುಲ್ ಗಾಂಧಿಗೆ ಹೆದರ್ತಾರೆ: ಮಲ್ಲಿಕಾರ್ಜುನ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯವರು ರಾಹುಲ್ ಗಾಂಧಿಗೆ ಹೆದರ್ತಾರೆ: ಮಲ್ಲಿಕಾರ್ಜುನ ಖರ್ಗೆ

ಬೆಳಗಾವಿ: ಬಿಜೆಪಿಯವರು ರಾಹುಲ್ ಗಾಂಧಿಗೆ ಹೆದರುತ್ತಾರೆ. ಹಾಗಾಗಿ ಪದೇಪದೇ ರಾಹುಲ್ ಗಾಂಧಿ ಹೆಸರು ಬಳಸುತ್ತಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರಿಗೆ ಏನೂ ಗೊತ್ತಿಲ್ಲ ಎಂದು ಬಿಜೆಪಿಯವರು ಬಿಜೆಪಿಯವರು ಹೇಳುತ್ತಾರೆ. ಪಶ್ಚಿಮ ಬಂಗಾಳದಲ್ಲಿ ರಾಹುಲ್ ಗಾಂಧಿ ಹೆಸರಿಲ್ಲದೆ ಚುನಾವಣೆ ಮಾಡುತ್ತಿದ್ದಾರೆಯೇ? ಕೇರಳ, ತಮಿಳುನಾಡಿನಲ್ಲಿಯೂ ರಾಹುಲ್ ಗಾಂಧಿ ಹೆಸರು ಹೇಳಿ ಟೀಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಮುಂದೆ ದೇಶದ ಮಹಾನಾಯಕ ಆಗುತ್ತಾರೆ. ರಾಹುಲ್ ಗಾಂಧಿಯವರನ್ನು ಕುಗ್ಗಿಸಲು ಪದೇಪದೇ ಬಿಜೆಪಿಯವರು ಅವರ ಹೆಸರನ್ನು ಪ್ರಸ್ತಾಪಿಸುತ್ತಾರೆ ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...