ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು ಎಂಬುದು ನಮ್ಮೆಲ್ಲರ ಆಶಯ. ವಿಪಕ್ಷ ನಾಯಕನ ಆಯ್ಕೆ ನಿಟ್ಟಿನಲ್ಲಿ ಇಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿ ನಾಯಕರ ಸಭೆ ನಡೆಯಲಿದೆ. ಸಭೆಯಲ್ಲಿಯೂ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ರಾಹುಲ್ ಗಾಂಧಿಗೆ ವಿಪಕ್ಷ ನಾಯಕನ ಸ್ಥಾನ ನೀಡಬೇಕು. ದೇಶಾದ್ಯಂತ ಪಾದಯಾತ್ರೆಯನ್ನು ಮಾಡಿ ಪಕ್ಷ ಸಂಘಟನೆ ಹಾಗೂ ಜನರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಸಂಸತ್ ನಲ್ಲಿ ಚರ್ಚಿಸಲು ಗಟ್ಟಿ ಧ್ವನಿಯಾಗಿ ರಾಹುಲ್ ಗಾಂಧಿ ನಿಲ್ಲಬೇಕು ಹಾಗಾಗಿ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು ಎಂಬುದು ನಮ್ಮ ಅಭಿಪ್ರಾಯ ಎಂದರು.