ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಆಲ್ ಇಂಡಿಯಾ ದಲಿತ್ ಆಕ್ಷನ್ ಕಮಿಟಿ ಸಲ್ಲಿಸಿದ್ದ ಪಿಐಎಲ್ ನ್ನು ಹೈಕೋರ್ಟ್ ವಜಾಗೊಳಿಸಿದೆ. 25,000 ರೂ ದಂಡ ವಿಧಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಸಿಜೆ ಎನ್.ವಿ.ಆಂಜಾರಿಯಾ, ನ್ಯಾ. ಕೆ.ವಿ. ಅರವಿಂದ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಲೋಕಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ ಮತಗಳಿಕೆಗಾಗಿ ಸುಳ್ಳು ಆರೋಪ ಮಾಡಿದ್ದಾರೆ. ಇದರಿಂದಾಗಿ ಹಾಸನದ ಮಹಿಳೆಯರ ಗೌರವಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿ, ರಾಹುಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಿಐಎಲ್ ಸಲ್ಲಿಕೆಯಾಗಿತ್ತು.