alex Certify ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಸೋನಿಯಾಗಾಂಧಿಗಷ್ಟೇ ಆಹ್ವಾನ; ರಾಹುಲ್ – ಪ್ರಿಯಾಂಕಾರನ್ನು ಆಹ್ವಾನಿಸದಿರುವುದರ ಹಿಂದಿದೆ ಈ ಕಾರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಸೋನಿಯಾಗಾಂಧಿಗಷ್ಟೇ ಆಹ್ವಾನ; ರಾಹುಲ್ – ಪ್ರಿಯಾಂಕಾರನ್ನು ಆಹ್ವಾನಿಸದಿರುವುದರ ಹಿಂದಿದೆ ಈ ಕಾರಣ

ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಕಾಂಗ್ರೆಸ್ ನ ಸೋನಿಯಾ ಗಾಂಧಿಯವರನ್ನಷ್ಟೇ ಆಹ್ವಾನಿಸಲಾಗಿದೆ. ಕಾಂಗ್ರೆಸ್ ನ ಕುಟುಂಬವೆಂದೇ ಹೆಸರು ಗಳಿಸಿರುವ ಸೋನಿಯಾ ಗಾಂಧಿ ಕುಟುಂಬದಿಂದ ಅವರಿಗಷ್ಟೇ ಆಹ್ವಾನ ನೀಡಲಾಗಿದೆ. ಅವರ ಮಕ್ಕಳಾದ ಸಂಸದ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಗೆ ಮಾನದಂಡದ ಆಧಾರದ ಮೇಲೆ ಆಹ್ವಾನಕ್ಕೆ ಅರ್ಹರಲ್ಲ ಎಂದು ಪರಿಗಣಿಸಲಾಗಿದೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ನಿಗದಿಪಡಿಸಿದ ಮಾನದಂಡಗಳ ಆಧಾರದ ಮೇಲೆ ಆಹ್ವಾನಗಳನ್ನು ಸ್ವೀಕರಿಸಲು ಅರ್ಹತೆ ಹೊಂದಿಲ್ಲ ಎಂದು ಹೇಳಲಾಗಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆಯಾಗಿ ಸೋನಿಯಾ ಗಾಂಧಿ ಅವರನ್ನಷ್ಟೇ ದೇವಸ್ಥಾನ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟ್ರಸ್ಟ್ ಪ್ರಮುಖ ರಾಜಕೀಯ ಪಕ್ಷಗಳ ಅಧ್ಯಕ್ಷರು, ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಮತ್ತು 1984 ಮತ್ತು 1992 ರ ನಡುವೆ ರಾಮಮಂದಿರ ಚಳವಳಿಯಲ್ಲಿ ಭಾಗವಹಿಸಿದವರು ಎಂದು ಮೂರು ವರ್ಗದಲ್ಲಿ ಅತಿಥಿಗಳಿಗೆ ಆಹ್ವಾನಗಳನ್ನು ಕಳುಹಿಸುತ್ತಿದೆ. ವಿಶೇಷ ಅತಿಥಿಗಳಲ್ಲಿ ದಾರ್ಶನಿಕರು, ಕೈಗಾರಿಕೋದ್ಯಮಿಗಳು, ಕಲಾವಿದರು ಮತ್ತು ಕ್ರೀಡಾಪಟುಗಳೂ ಸೇರಿದ್ದಾರೆ.

ವಿಎಚ್‌ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಇತ್ತೀಚೆಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಿದ್ದರು. ಕಾಂಗ್ರೆಸ್‌ನ ಸದನ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೂ ವಿ ಹೆಚ್ ಪಿ ಆಹ್ವಾನ ಕಳುಹಿಸಿದೆ.

ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಶೀಘ್ರದಲ್ಲೇ ಅವರ ಆಹ್ವಾನವನ್ನು ಸ್ವೀಕರಿಸಲಿದ್ದಾರೆ ಎಂದು ಟ್ರಸ್ಟ್ ನ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ. ಬಿಜೆಪಿ ದಿಗ್ಗಜರಾದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಈಗಾಗಲೇ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

“ಭಗವಂತ ರಾಮನು ಎಲ್ಲರಿಗೂ ಸೇರಿದವನು. ಅತಿಥಿಗಳ ಆಹ್ವಾನದಲ್ಲಿ ಯಾವುದೇ ತಾರತಮ್ಯ ಇರುವುದಿಲ್ಲ. ಸಮಾರಂಭವು ರಾಜಕೀಯ ಬಣ್ಣ ಪಡೆದುಕೊಳ್ಳುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಾವು ನಿರ್ಧರಿಸಿದ್ದೇವೆ” ಎಂದು ವಿಎಚ್‌ಪಿ ರಾಷ್ಟ್ರೀಯ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದ್ದಾರೆ. ಬಿಜೆಪಿ ಮತ್ತು ಆರ್ ಎಸ್ ಎಸ್ ಧರ್ಮವನ್ನು ರಾಜಕೀಯ ಸಾಧನವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಹಲವು ವಿರೋಧ ಪಕ್ಷದ ನಾಯಕರು ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ ದಿನಗಳ ನಂತರ ವಿಎಚ್‌ಪಿ ನಾಯಕರು ಸ್ಪಷ್ಟನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...