alex Certify ಇಡಿಯಿಂದ ರಾಹುಲ್ ಗಾಂಧಿ ವಿಚಾರಣೆ, ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಡಿಯಿಂದ ರಾಹುಲ್ ಗಾಂಧಿ ವಿಚಾರಣೆ, ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಇಡಿ ವಿಚಾರಣೆ ಎದುರಿಸಲಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಿಂದ ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ದೆಹಲಿಯ ಕಾಂಗ್ರೆಸ್ ಕಚೇರಿಯಿಂದ ಇಡಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಕೈಗೊಳ್ಳಲಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಕೆಪಿಸಿಸಿಯಿಂದ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ಇಡಿ ಕಚೇರಿ ಹೊರಗೆ ಕಾಂಗ್ರೆಸ್ ನಾಯಕರು, ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...