ಚಿತ್ರದುರ್ಗ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹರ್ತಿಕೋಟೆ ಗ್ರಾಮದಲ್ಲಿ ಮಾತನಾಡಿದ ಅವರು, ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ ವರದಿ ಅನುಷ್ಠಾನಕ್ಕೆ ಕಾಂಗ್ರೆಸ್ ಪಕ್ಷ ಆಗ್ರಹಿಸಿತ್ತು. ವರದಿ ಜಾರಿಗೊಳಿಸಲು ಈ ಹಿಂದೆ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಿತ್ತು. ಮೀಸಲಾತಿ ಹೆಚ್ಚಳ ಮಾಡಬೇಕೆನ್ನುವುದು ಕಾಂಗ್ರೆಸ್ ಪಕ್ಷದ ಒತ್ತಾಯವಾಗಿತ್ತು. ಎರಡೂವರೆ ವರ್ಷ ಬಿಜೆಪಿಯವರು ವರದಿ ಅನುಷ್ಠಾನ ಮಾಡಲಿಲ್ಲ. ಸಮಿತಿ ವರದಿ ವಿಚಾರದಲ್ಲಿ ಸರ್ಕಾರ ಪ್ರಕ್ರಿಯೆಯನ್ನೇ ತೋರಿಸಲಿಲ್ಲ ಎಂದು ಟೀಕಿಸಿದ್ದಾರೆ.