alex Certify ಚುನಾವಣೆ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ: ಕಾಂಗ್ರೆಸ್ ನಲ್ಲಿ ಹೊಸ ಸಂಚಲನ: ಪ್ರಿಯಾಂಕಾ ಗೆದ್ರೆ ಸಂಸತ್ ನಲ್ಲಿ ಗಾಂಧಿ ಕುಟುಂಬದ ಮೂವರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ: ಕಾಂಗ್ರೆಸ್ ನಲ್ಲಿ ಹೊಸ ಸಂಚಲನ: ಪ್ರಿಯಾಂಕಾ ಗೆದ್ರೆ ಸಂಸತ್ ನಲ್ಲಿ ಗಾಂಧಿ ಕುಟುಂಬದ ಮೂವರು

ನವದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಡುವುದಾಗಿ ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೇರಳದ ವಯನಾಡ್ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಹುಲ್ ಗಾಂಧಿ ಎರಡು ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದಾರೆ. ಆದರೆ, ಕಾನೂನಿನ ಪ್ರಕಾರ ಅವರು ಒಂದನ್ನು ಖಾಲಿ ಮಾಡಬೇಕು. ರಾಹುಲ್ ಗಾಂಧಿ ರಾಯ್ ಬರೇಲಿಯನ್ನು ಉಳಿಸಿಕೊಳ್ಳುತ್ತಾರೆ ಮತ್ತು ಪ್ರಿಯಾಂಕಾ ಜೀ ವಯನಾಡಿನಿಂದ ಸ್ಪರ್ಧಿಸಲು ನಾವು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

2019ರಲ್ಲಿಯೇ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ 2024ರಲ್ಲಿ ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ನಂತರ ರಾಯಬರೇಲಿಯಲ್ಲಿ ಸೋನಿಯಾ ಗಾಂಧಿ ಅವರ ಬದಲಿಗೆ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿತ್ತು.

ಇದೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಖಚಿತವಾಗಿದೆ. ಈ ಮೂಲಕ ಚುನಾವಣಾ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ಪ್ರವೇಶಿಸಲಿದ್ದು, ಕಾಂಗ್ರೆಸ್ ನಲ್ಲಿ ಹೊಸ ಸಂಚಲನ ಮೂಡಿಸಿದೆ.

ಪ್ರಿಯಾಂಕಾ ಗಾಂಧಿ ವಯನಾಡು ಕ್ಷೇತ್ರದಿಂದ ಜಯಗಳಿಸಿದ್ದಲ್ಲಿ ಸಂಸತ್ ನಲ್ಲಿ ಗಾಂಧಿ ಕುಟುಂಬದ ಮೂವರು ಪ್ರತಿನಿಧಿಸಲಿದ್ದಾರೆ. ಕೇರಳ ಕಾಂಗ್ರೆಸ್ ಘಟಕ ಪ್ರಿಯಾಂಕಾ ಗಾಂಧಿ ಸ್ಪರ್ಧೆಯನ್ನು ಸ್ವಾಗತಿಸಿದೆ. ರಾಹುಲ್ ಗಾಂಧಿ 3.64 ಲಕ್ಷ ಮತಗಳ ಅಂತರದಿಂದ ಜಯಗಳಿಸಿದ್ದರು. ಅವರು ಶೇಕಡ 64.7 ರಷ್ಟು ಮತ ಪಡೆದಿದ್ದರು.

ಕಳೆದ ಐದು ವರ್ಷಗಳಿಂದ ನಾನು ವಯನಾಡ್ ಸಂಸದನಾಗಿದ್ದೆ. ವಯನಾಡಿನ ಜನರು ನನಗೆ ಪ್ರೀತಿಯನ್ನು ನೀಡಿದ್ದಾರೆ, ಅದಕ್ಕಾಗಿ ನಾನು ಅವರಿಗೆ ಧನ್ಯವಾದಗಳು. ಪ್ರಿಯಾಂಕಾ ವಯನಾಡ್‌ನಿಂದ ಸ್ಪರ್ಧಿಸುತ್ತಾರೆ, ನಾನು ವಯನಾಡ್‌ಗೆ ಭೇಟಿ ನೀಡುತ್ತೇನೆ ಮತ್ತು ನೀಡಿದ ಭರವಸೆಗಳನ್ನು ಈಡೇರಿಸುತ್ತೇನೆ. ನಾನು ರಾಯ್ ಬರೇಲಿಯೊಂದಿಗೆ ಸುದೀರ್ಘ ಸಂಬಂಧವನ್ನು ಹೊಂದಿದ್ದೇನೆ. ಆ ಕ್ಷೇತ್ರ ಪ್ರತಿನಿಧಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...