
ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ತೆರಳುವ ಮೊದಲು ಮೈಸೂರು ವಿಮಾನ ನಿಲ್ದಾಣದಲ್ಲಿ ಕೆಲಕಾಲ ತಂಗಿದ್ದಾರೆ. ಈ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ್ದು, ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.
ರಾಹುಲ್ ಗಾಂಧಿ ಮೈಸೂರು ಮಾರ್ಗವಾಗಿ ಕೇರಳದ ವಯನಾಡಿಗೆ ಪ್ರಯಾಣ ಬೆಳೆಸಿದ್ದಾರೆ. ಅವರನ್ನು ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ದೋಸೆ ಸೇವಿಸಿದ ರಾಹುಲ್ ಗಾಂಧಿ ಮುಖಂಡರಿಂದ ಸಿದ್ದರಾಮಯ್ಯ ಬಿಡುವಿಲ್ಲದ ಪ್ರಚಾರದಿಂದ ಬಳಲಿದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಕೂಡಲೇ ಅವರಿಗೆ ಕರೆ ಮಾಡಿ ಚುನಾವಣೆಗಿಂತ ನಿಮ್ಮ ಆರೋಗ್ಯ ಮುಖ್ಯ. ವಿಶ್ರಾಂತಿ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ಕೇರಳದ ವಯನಾಡಿಗೆ ತೆರಳುವ ಮೊದಲು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ವಿಶ್ರಾಂತಿ ಪಡೆದು ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮುಂದುವರೆಸಿದ್ದಾರೆ.