)
ಲೋಕಸಭೆಗೆ ಈಗ ಚುನಾವಣೆ ನಡೆಯುತ್ತಿದ್ದು ಈಗಾಗಲೇ ಹಲವು ಹಂತಗಳ ಮತದಾನ ಪೂರ್ಣಗೊಂಡಿದೆ. ಒಟ್ಟು ಏಳು ಹಂತಗಳಲ್ಲಿ ಈ ಚುನಾವಣೆ ನಡೆಯುತ್ತಿದ್ದು ಜೂನ್ 4 ರಂದು ಫಲಿತಾಂಶ ಹೊರ ಬೀಳಲಿದೆ.
ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಉತ್ತರ ಪ್ರದೇಶದಲ್ಲಿ ಮಾತನಾಡುವ ವೇಳೆ ಕಾಂಗ್ರೆಸ್ ಕೂಡ ತಪ್ಪುಗಳನ್ನು ಮಾಡಿದೆ. ಇದು ಭವಿಷ್ಯದಲ್ಲಿ ತನ್ನ ರಾಜಕಾರಣ ಬದಲಿಸಿಕೊಳ್ಳಬೇಕಾದ ಅಗತ್ಯವಿದೆಯೆಂದು ಹೇಳುವ ಮೂಲಕ ಅಚ್ಚರಿ ಮಾಡಿಸಿದ್ದಾರೆ.
ಲಕ್ನೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ನಾನು ಪಕ್ಷ ಸೇರಿದ ದಿನದಿಂದಲೂ ಈ ಕುರಿತು ಹೇಳುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ತನ್ನ ರಾಜಕಾರಣವನ್ನು ಬದಲಿಸಿಕೊಳ್ಳಬೇಕಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.