alex Certify `ಗೃಹಲಕ್ಷ್ಮಿ ಯೋಜನೆ’ಗೆ ನಾಳೆ ರಾಹುಲ್ ಗಾಂಧಿ ಚಾಲನೆ : 1.08 ಕೋಟಿ `ಯಜಮಾನಿ’ಯರ ಖಾತೆಗೆ 2,000 ರೂ.ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

`ಗೃಹಲಕ್ಷ್ಮಿ ಯೋಜನೆ’ಗೆ ನಾಳೆ ರಾಹುಲ್ ಗಾಂಧಿ ಚಾಲನೆ : 1.08 ಕೋಟಿ `ಯಜಮಾನಿ’ಯರ ಖಾತೆಗೆ 2,000 ರೂ.ವರ್ಗಾವಣೆ

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರ ನಾಳೆ  ಮೈಸೂರಿನಲ್ಲಿ ರಾಜ್ಯ ಸರ್ಕಾರ  ಅಧಿಕೃತವಾಗಿ ಚಾಲನೆ ನೀಡಲಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಳ್ಳಲಿದ್ದಾರೆ.

ಗೃಹಲಕ್ಷ್ಮೀ ಯೋಜನೆಯಡಿ ನಾಳೆ ಐದು ಜಿಲ್ಲೆಯ ಫಲಾನುಭವಿಗಳ ಖಾತೆಗೆ 2 ಸಾವಿರ ರೂ. ಖಾತೆಗೆ ವರ್ಗಾವಣೆ ಮಾಡಲಿದ್ದಾರೆ. ರಾಹುಲ್ ಗಾಂಧಿ ದೆಹಲಿಯಿಂದ ಬುಧವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದು, ಅಲ್ಲಿಂದ ಮೈಸೂರಿಗೆ ತೆರಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರಚೀಟಿಗಳಲ್ಲಿ ನಮೂದಾಗಿರುವ ಮನೆಯ ಯಜಮಾನಿಯ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ  ನೇರ ನಗದು ವರ್ಗಾವಣೆ ಅಥವಾ ಆಧಾರ್ ಲಿಂಕ್ ಆಗದಿರುವ ಬ್ಯಾಂಕ್ ಖಾತೆಗೆ ಆರ್‍ಟಿಜಿಎಸ್ ಮೂಲಕ ಮಾಸಿಕ ರೂ.2,000/- ವಿತರಿಸಲಾಗುತ್ತದೆ. ಆದರೆ ಕುಟುಂಬದ ಯಜಮಾನಿ, ಗಂಡ ತೆರಿಗೆ ಪಾವತಿಸುತ್ತ್ತಿದ್ದರೆ ಈ ಯೋಜನೆಯ ಲಾಭ ಪಡೆಯಲು ಬರುವುದಿಲ್ಲ. ಫಲಾನುಭವಿಗಳ ನೋಂದಣಿಯು ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿ, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಗ್ರಾಮದ ಪ್ರಜಾಪ್ರತಿನಿಧಿಗಳನ್ನು ನೇಮಿಸಿದೆ. ಪ್ರಜಾಪ್ರತಿನಿಧಿಗಳು ನೋಂದಣಿಗಾಗಿ ಮನೆ ಮನೆಗಳಿಗೆ ಭೇಟಿ ನೀಡುತ್ತಾರೆ. ಅವರ ಸಹಾಯದಿಂದಲೂ ನೋಂದಾಯಿಸಿಕೊಳ್ಳಬಹುದು.

 ಈಗಾಗಲೇ ಮಹಿಳಾ ಫಲಾನುಭವಿಗಳನ್ನು ನೋಂದಣಿ ಮಾಡಿಸಿಕೊಂಡಿದ್ದು, ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಲೆಗಳು ಅಥವಾ ಶಾಲಾ ಆವರಣಗಳನ್ನು ಹೊರತುಪಡಿಸಿ, ಸಮುದಾಯ ಭವನ, ಚೌಲ್ಟ್ರಿಗಳು ಹಾಗೂ ಗ್ರಾಮೀಣ ಭಾಗಗಳಲ್ಲಿರುವ ಸಭಾಂಗಣಗಳಲ್ಲಿ ಟಿವಿ ಹಾಗೂ ಎಲ್‍ಇಡಿ ಪರದೆ ಮೂಲಕ ಈ ಕಾರ್ಯಕ್ರಮವನ್ನು ನೇರವಾಗಿ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ವೀಕ್ಷಣೆ ಮಾಡಲು ಅಗತ್ಯ ಕ್ರಮವಹಿಸಬೇಕು.  ಇದಕ್ಕಾಗಿ ಅಗತ್ಯ ಇಂಟರ್‍ನೆಟ್ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...