
ನವದೆಹಲಿ: ಇಂದು ಉತ್ತರ ಪ್ರದೇಶದ ಹತ್ರಾಸ್ ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.
ಸತ್ಸಂಗದ ವೇಳೆ ದುರಂತ ಸಂಭವಿಸಿದ ಸ್ಥಳಕ್ಕೆ ಅವರು ಭೇಟಿ ನೀಡಲಿದ್ದು, ದುರಂತದಲ್ಲಿ ಮೃತಪಟ್ಟವರ ಸಂಬಂಧಿಕರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಇದೇ ವೇಳೆ ಅವರು ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲಿದ್ದಾರೆ.
ಹತ್ರಾಸ್ ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಉಂಟಾಗಿ 120ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಘಟನೆ ನಡೆದ ನಂತರ ಹತ್ರಾಸ್‌ಗೆ ಹಿರಿಯ ವಿರೋಧ ಪಕ್ಷದ ನಾಯಕರ ಮೊದಲ ಭೇಟಿ ಇದಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಹತ್ರಾಸ್ ಗೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿದ್ದರು.