ಬೆಂಗಳೂರು: ನಾಳೆಯಿಂದ ಎರಡು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಬೆಳಿಗ್ಗೆ 9:30ಕ್ಕೆ ದೆಹಲಿ ವಿಮಾನ ನಿಲ್ದಾಣದಿಂದ ಹೊರಟು 11:50ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಮಧ್ಯಾಹ್ನ 12:25ಕ್ಕೆ ಕೋಲಾರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಸತ್ಯಮೇವ ಜಯತೆ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.40 ಕ್ಕೆ ಕೋಲಾರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದು, ಸಂಜೆ 5 ಗಂಟೆಗೆ ಶಾಂಗ್ರಿಲಾ ಹೋಟೆಲ್ ನಲ್ಲಿ ರಾಹುಲ್ ವಿಶ್ರಾಂತಿ ಪಡೆಯಲಿದ್ದಾರೆ .
ಸಂಜೆ 5:30ಕ್ಕೆ ಜೆಪಿ ನಗರದಲ್ಲಿ ನಡೆಯಲಿರುವ ಬೀದಿಬದಿ ವ್ಯಾಪಾರಿಗಳು, ಪೌರಕಾರ್ಮಿಕರೊಂದಿಗೆ ಸಂವಾದದಲ್ಲಿ ಭಾಗವಹಿಸಲಿದ್ದಾರೆ. 6.45ಕ್ಕೆ ಇಂದಿರಾ ಗಾಂಧಿ ಭವನ ಉದ್ಘಾಟಿಸಲಿದ್ದಾರೆ. ಏಪ್ರಿಲ್ 17ರಂದು ಬೀದರ್ ಜಿಲ್ಲಾ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಬಾಲ್ಕಿ, ಹುಮ್ನಾಬಾದ್ ನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.