ಬೆಂಗಳೂರು : ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಇಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸುತ್ತಿದ್ದೇವೆ. ಇಂದು ಪ್ರಜಾಪ್ರಭುತ್ವದ ಕಪ್ಪು ದಿನ. ರಾಹುಲ್ ಗಾಂಧಿ ಮೇಲೆ ಕೇಸ್ ಹಾಕಿ ಸಂಸದ ಸ್ಥಾನ ವಜಾ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನೂ ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ ಎಂದರು.
ಬಿಜೆಪಿಯವರು ಅನ್ಯಾಯದ ವಿರುದ್ಧ ಧ್ವನಿ ಎತ್ತುವುದನ್ನು ಮೊಟಕುಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಇಂದು ಮಧ್ಯಾಹ್ನ 3.30 ಕ್ಕೆ ಎಲ್ಲಾ ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.