
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ. ನವದೆಹಲಿಯ ವಿದ್ಯುತ್ ಲೇನ್ ನಲ್ಲಿರುವ ಇಡಿ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿ ವಿಚಾರಣೆ ನಡೆಸಲಾಗುವುದು.
ಕಳೆದ ಸೋಮವಾರದಿಂದ 3 ದಿನಗಳ ಕಾಲ ನಿರಂತರ ವಿಚಾರಣೆ ಎದುರಿಸಿದ ನಂತರ ಅವರಿಗೆ ವಿನಾಯಿತಿ ನೀಡಲಾಗಿತ್ತು. ವಿನಾಯಿತಿ ನೀಡಿ ಶುಕ್ರವಾರ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ, ತಾಯಿ ಸೋನಿಯಾ ಗಾಂಧಿಯವರಿಗೆ ಅನಾರೋಗ್ಯ ಮತ್ತು ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿರಲಿಲ್ಲ.
ಇಂದು ನಾಲ್ಕನೇ ದಿನದ ವಿಚಾರಣೆಗೆ ಅವರು ಇಡಿ ಕಚೇರಿಗೆ ತೆರಳಲಿದ್ದಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.