![](https://kannadadunia.com/wp-content/uploads/2025/02/rahul-thonse.jpg)
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಆರೋಪಿ ರಾಹುಲ್ ತೋನ್ಸೆ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.
ಉದ್ಯಮಿ ವಿವೇಕ ಹೆಗ್ಡೆ ಹಾಗೂ ಸ್ನೇಹಿತರಿಗೆ ಕ್ಯಾಸಿನೋದಲ್ಲಿ ಹಣ ಹೂಡಿಕೆ ಹೆಸರಲ್ಲಿ 25 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ತೋನ್ಸೆ, ಆತನ ತಂದೆ ರಾಮಕೃಷ್ಣ ರಾವ್, ತಾಯಿ ರಾಜೇಶ್ವರಿ ಹಾಗೂ ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಪ್ರಕರಣದಲ್ಲಿ ಬಂಧಿತರಾಗಿದ್ದ ರಾಮಕೃಷ್ಣ ರಾವ್, ಹೈಕೋರ್ಟ್ ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಪ್ರಕರಣದ ತನಿಖೆ ನಡೆಸಿರುವ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು ವಿದೇಶದಲ್ಲಿ ತಲೆಮರೆಸಿಕೊಂಡಿರುವ ರಾಹುಲ್ ತೋನ್ಸೆ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಅಷ್ಟೇ ಅಲ್ಲ, ರಾಹುಲ್ ತೋನ್ಸೆ ಸಹೋದರಿ ಹಾಗೂ ಭಾವನ ವಿರುದ್ಧವೂ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.