ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ. ರಾಯಚೂರಿನಲ್ಲಿ ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
32 ವರ್ಷದ ಈಶ್ವರಿ ಮೃತ ಬಾಣಂತಿ. ರಾಯಚೂರಿನ ಗಾರಲದಿನ್ನಿಯ ಈಶ್ವರಿ ಡಿ.8ರಂದು ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಖಲಾಗಿದ್ದರು. ಸಹಜ ಹೆರಿಗೆಯಾಗಿತ್ತು. ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದ ಈಶ್ವರಿಗೆ ತೀವ್ರ ರಕ್ತಸ್ರಾವ, ಜ್ವರ, ಆಯಾಸದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಮತ್ತೆ ಮಟಮಾರಿ ಆಸ್ಪತ್ರೆಗೆದಾಖಲಿಸಲಾಗಿತ್ತು. ಆದರೆ ಸಿಬ್ಬಂದಿ ನಿರ್ಲಕ್ಷ ಹಿನ್ನೆಲೆಯಲ್ಲಿ ರಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಈಶ್ವರಿ ಡಿ.13ರಂದು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕಳೆದ ಮೂರು ತಿಗಳಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಇದೀಗ ಮೃತಳ ಕುಟುಂಬದವರು ಮಾನ್ವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.