ರಾಯಚೂರು: ರಾಜ್ಯದಲ್ಲಿ ಒಂದೆಡೆ ರಣಬಿಸಿಲು, ಮತ್ತೊಂದೆಡೆ ಬಿಸಿ ಗಾಳಿಯಿಂದಾಗಿ ಜನರು ತತ್ತರಿಸುತ್ತಿದ್ದಾರೆ. ತಾಪಮಾನ ಹೆಚ್ಚಳದಿಂದಾಗಿ ಹಲವರಲ್ಲಿ ನಿರ್ಜಲೀಕರಣ ಸಮಸ್ಯೆಯುಂಟಾಗುತ್ತಿದೆ. ಪುಟ್ಟ ಮಕ್ಕಳು ತೀವ್ರ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಈ ನಡುವೆ ರಾಯಚೂರಿನಲ್ಲಿ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ.
ರಣಬಿಸಿಲಿನಿಂದಾಗಿ ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಚಿಕ್ಕಸೂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. 9 ವರ್ಷದ ಆರತಿ, 7 ವರ್ಷದ ಪ್ರಿಯಾಂಕಾ ಮೃತರು. ಇನ್ನೋರ್ವ ಬಾಲಕನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಮಕ್ಕಳು ಹುಸೇನಮ್ಮ ಹಾಗೂ ಮಾರುತಿ ದಂಪತಿ ಮಕ್ಕಳು. ಈ ನಡುವೆ ಮಾರುತಿ ಎಂಬುವವರೂ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.