ರಾಯಚೂರು: ಹಿಂದೂ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ವಿಕೃತಿ ಮೆರೆಯುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಅಕ್ಬರ್ ಬಂಧಿತ ಯುವಕ. ರಸ್ತೆಯಲ್ಲಿ ಹೋಗುತ್ತಿದ್ದ ಹಿಂದೂ ಯುವತಿಯರಿಗೆ ಮರ್ಮಾಂಗ ತೋರಿಸಿ ವಿಕೃತವಾಗಿ ವರ್ತಿಸುತ್ತಿದ್ದ. ರಾಯಚೂರು ನಗರದ ಬಸ್ ನಿಲ್ದಾಣ ಬಳಿಯ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಕಾಲೇಜಿಗೆ ಹೋಗುವ ಹಿಂದೂ ವಿದ್ಯಾರ್ಥಿನಿಯರನ್ನು ಹಾಗೂ ಮಹಿಳೆಯರನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದ. ಬಳಿಕ ಅವರ ಮುಂದೆ ನಿಂತು ಮರ್ಮಾಂಗ ತೋರಿಸಿ ವಿಕೃತವಾಗಿ ವರ್ತಿಸುತ್ತಿದ್ದ.
ಈ ತನ ವಿಕೃತಿಯನ್ನು ಸ್ಥಳೀಯರು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಪ್ರತಿದಿನ ಕಾಮುಕ ಅಕ್ಬರ್ ಇದೇ ರೀತಿ ವರ್ತಿಸುತ್ತಿದ್ದ. ಸ್ಥಳೀಯರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.