alex Certify ಅಧಿಕಾರಿಗೆ ನಗ್ನ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್; ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಧಿಕಾರಿಗೆ ನಗ್ನ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್; ದೂರು ದಾಖಲು

ರಾಯಚೂರು: ಅಧಿಕಾರಿಗೆ ನಗ್ನ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಹಟ್ಟಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಟ್ಟಿ ಚಿನ್ನದ ಗಣಿ ಸಿನಿಯರ್ ಗೇಜ್ ಆಪರೇಟರ್ ಗೆ ಸೈಬರ್ ವಂಚಕರು ಕಳೆದ ಒಂದು ವರ್ಷದಿಂದ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರಂತೆ ಇದರಿಂದ ನೊಂದ ಸಿನಿಯರ್ ಗೇಜ್ ಆಪರೇಟರ್ ಮಹೇಂದ್ರ ಕುರ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಗಣಿಯೊಳಗೆ ಕೆಲಸ ಮಾಡುತ್ತಿದ್ದ ಮಹೇಂದ್ರ ಅವರಿಗೆ ಕಳೆದ ವರ್ಷ ಮೊಬೈಲ್ ಗೆ ಒಂದು ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದ್ದರಂತೆ. ಮಹೇಂದ್ರ ವಿಡಿಯೋ ಕಾಲ್ ನಲ್ಲಿ ನಗ್ನ ಸ್ಥಿತಿಯಲ್ಲಿರುವ ಯುವತಿ ಜೊತೆ ಮಾತನಾಡುತ್ತಿರುವಂತೆ ವಿಡಿಯೋ ಕ್ರಿಯೇಟ್ ಮಾಡಿ ದುಷ್ಕರ್ಮಿಗಳು ಕಳುಹಿಸಿದ್ದಾರಂತೆ. ಈ ವಿಡಿಯೋ ಇಟ್ಟುಕೊಂಡು ಆರೋಪಿಗಳು ಕಳೆದ ಒಂದು ವರ್ಷದಿಂದ ಹಣಕ್ಕಾಗಿ ಬೇಡಿಕೆ ಇಟ್ಟು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರಂತೆ.

ನಿರಂತರ ಬ್ಲ್ಯಾಕ್ ಮೇಲ್ ಗೆ ಬೇಸತ್ತ ಮಹೇಂದ್ರ, ಹಟ್ಟಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...