
ರಾಯಚೂರು: ಮಹಿಳೆಯೊಬ್ಬರ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದ ಗುಂಡೂರಾವ್ ಕಾಲೋನಿಯಲ್ಲಿ ನಡೆದಿದೆ.
ಮಂಜುಳಾ (45) ಮೃತ ಮಹಿಳೆ. ಮಂಜುಳಾ ಹಟ್ಟಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇನ್ನೊಂದೆಡೆ ಕೊಲೆ ಮಾಡಿರುವ ಆರೋಪವೂ ಕೇಳಿಬಂದಿದೆ.
ಎರಡು ವರ್ಷಗಳ ಹಿಂದೆ ಮಹಿಳೆ ಮಂಜುಳಾ ಪತಿ ಮೃತಪಟ್ಟಿದ್ದರು. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಹಿಳೆಯ ಸಹೋದರ ದೂರು ನೀಡಿದ್ದಾರೆ. ಹಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.