ಬೆಂಗಳೂರು: ರಾಯಚೂರಿನಲ್ಲಿ ನರೇಗಾ ಅನುಷ್ಠಾನದಲ್ಲಿ ಗೋಲ್ ಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ರಾಯಚೂರಿನ ದೇವದುರ್ಗದಲ್ಲಿ 33 ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಹಿಂದಿನ ಇಓ ಪಂಪಾಪತಿ ಹಿರೇಮಠ, ಸಹಾಯಕ ನಿರ್ದೇಶಕ ಬಸಣ್ಣ ನಾಯಕ್ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ಸಾಮಾಜಿಕ ಪರಿಶೋಧನಾ ನಿರ್ದೇಶಕರಿಂದ ವರದಿ ಸಲ್ಲಿಕೆ ಮಾಡಲಾಗಿದೆ.
ಜಿಲ್ಲಾ ಪಂಚಾಯತ್ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ್ ನಿರ್ದೇಶನ ಮೇರೆಗೆ ಈಗಿನ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಅಣ್ಣಾರಾಮ್ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.