ರಾಯಚೂರು: ಮಂಗಳೂರು ಬಳಿಕ ರಾಯಚೂರಿನಲ್ಲಿಯೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.
ರಾಯಚೂರಿನ ಎಲ್.ಬಿ.ಎಸ್. ನಗರದ ಮನೆಯೊಂದರ ಮೇಲೆ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ 2.66 ಕೆಜಿ ಗಾಂಜಾ ಮಿಶ್ರಿತ ಚಾಕೊಲೇಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಅಬಕಾರಿ ನಿರೀಕ್ಷಕ ಹನುಮಂತ ಗುತ್ತೇದಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ದಾಳಿಯ ವೇಳೆ 482 ಗಾಂಜಾ ಮಿಶ್ರಿತ ಚಾಕೊಲೇಟ್ ದೊರೆತಿದ್ದು, ರಾಚಯ್ಯಸ್ವಾಮಿ, ಅಮರಯ್ಯ ಸ್ವಾಮಿ ಎಂಬುವರನ್ನು ಬಂಧಿಸಲಾಗಿದೆ. ಇವರು ಉತ್ತರ ಪ್ರದೇಶ ಮೂಲದವರಿಂದ ಚಾಕೊಲೇಟ್ ಗಳನ್ನು ತಂದು ವಿವಿಧ ಬಡಾವಣೆಗಳಲ್ಲಿ 50 ರಿಂದ 100 ರೂಪಾಯಿವರೆಗೆ ಮಾರಾಟ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.