
ರಾಯಚೂರು: ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ಬೆನ್ನಲ್ಲೇ ಅತ್ತ ರಾಯಚೂರಿನಲ್ಲಿಯೂ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದಿರುವ ಘಟನೆ ನಡೆದಿದೆ.
ರಾಯಚೂರಿನ ತಿಮ್ಮಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದಿದೆ. ತಡರಾತ್ರಿಯಿಂದ ಬೆಳಿಗ್ಗೆವರೆಗೂ ಗಣೇಶ ಮೂರ್ತಿ ವಿಸರ್ಜನೆ ನಡೆದಿದ್ದು, ಮೆರವಣಿಗೆ ವೇಳೆ ಗಲಾಟೆಯಾಗಿದೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿದುಬಂದಿದೆ.