
ರಾಯಚೂರು: ಮಹಿಳೆಯೋರ್ವರ ಶವ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಬಳಿ ಪತ್ತೆಯಾಗಿದೆ.
ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಹಾಗೂ ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕಳೆದ ಮೂರು ದಿನಗಳ ಹಿಂದೆಯೇ ಘಟನೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಮಹಿಳೆ ಗುರುತು ಪತ್ತೆಯಾಗಿಲ್ಲ. ಮಹಿಳೆಯನ್ನು ಕೊಲೆ ಮಾಡಿ ಇಲ್ಲಿ ತಂದು ಹಾರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.