alex Certify BIG UPDATE : ಬೆಂಗಳೂರಲ್ಲಿ ಮುಂದುವರೆದ ‘IT’ ದಾಳಿ : ಮಹತ್ವದ ದಾಖಲೆಗಳು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಬೆಂಗಳೂರಲ್ಲಿ ಮುಂದುವರೆದ ‘IT’ ದಾಳಿ : ಮಹತ್ವದ ದಾಖಲೆಗಳು ವಶಕ್ಕೆ

ಬೆಂಗಳೂರು : ಬೆಂಗಳೂರಲ್ಲಿ ಐಟಿ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಮಹತ್ವದ ದಾಖಲೆಗಳನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸುಲ್ತಾನ್ ಪಾಳ್ಯದ ಮಾನ್ಯತಾ ಟೆಕ್ ಪಾರ್ಕ್ ನ ಅಂಬಿಕಾ ಪತಿ ನಿವಾಸದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ದಾಖಲೆಗಳು ಸಿಕ್ಕ ಬಳಿಕ ದಾಳಿ ಬಗ್ಗೆ ಏನಾದರೂ ಸ್ಪೋಟಕ ಮಾಹಿತಿ ಲಭ್ಯವಾಗುತ್ತಾ ಕಾದು ನೋಡಬೇಕಾಗಿದೆ.

ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ಮೈದುನನ ಮನೆಯಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ಪತ್ತೆಯಾಗಿದೆ. ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಅವರ ಮೈದುನ ಪ್ರದೀಪ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ಮುಂದುವರೆದಿದೆ.
ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಪತಿ ಅಂಬಿಕಾಪತಿ ಸಹೋದರ ಪ್ರದೀಪ್ ಗೆ ಸೇರಿದ ಆರ್.ಟಿ.ನಗರದ ಫ್ಲಾಟ್ ಗಳ ಮೇಲೆ ದಾಳಿ ನಡೆಸಲಾಗಿದ್ದು, ಬಾಕ್ಸ್ ಗಳಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ಹಣ ಸೀಜ್ ಮಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...