
ಚಿಕ್ಕಮಗಳೂರು: ಕಡೂರು ತಾಲೂಕು ಸರ್ವೆಯರ್ ಅಶೋಕ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹುಲ್ಲೇಹಳ್ಳಿಯ ವೆಂಕಟೇಶ್ ಅವರ ಬಳಿ ಲಂಚ ಸ್ವೀಕರಿಸುವಾಗ ದಾಳಿ ನಡೆಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹುಲ್ಲೇಹಳ್ಳಿಯ ಬಳಿ ಗ್ರಾಮದಲ್ಲಿ ಸರ್ವೆಗೆ ಬಂದಿದ್ದಾಗ ಅಶೋಕ್ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ದೂರುದಾರರಿಂದ 4,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ವೆಂಕಟೇಶ್ ನೀಡಿದ ದೂರಿನ ಅನ್ವಯ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ.