alex Certify ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ರೈಲ್ವೆ ನೌಕರ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ರೈಲ್ವೆ ನೌಕರ ಅರೆಸ್ಟ್

ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನೌಕರನನ್ನು ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನದೀಮ್ ಬಂಧಿತ ಆರೋಪಿ. ನೈರುತ್ಯ ರೈಲ್ವೆ ಮುಖ್ಯ ಕಚೇರಿಯ ಆರ್ಥಿಕ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ನದೀಮ್ ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿದ್ದಾನೆ. ರೈಲ್ವೆ ನೇಮಕಾತಿ ವಿಭಾಗದಲ್ಲಿ ನನಗೆ ಪರಿಚಿತರಿದ್ದಾರೆ. ಕೆಲಸ ಕೊಡಿಸಲು ಹಣ ಕೊಡಬೇಕು. ಕೊಡಲು ಆಗದಿದ್ದರೆ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಬೇಕು ಎಂದು ಹೇಳಿ ರೈಲ್ವೆ ಗೆಸ್ಟ್ ಹೌಸ್ ರೂಂಗೆ ಕರೆಸಿಕೊಂಡಿದ್ದಾನೆ. ಸಂಶಯಗೊಂಡ ಮಹಿಳೆ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಬಳಿಕ ಕೇಶ್ವಾಪುರ ಠಾಣೆಗೆ ದೂರು ನೀಡಲಾಗಿದೆ.

ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕೋರ್ಟ್ ಅನುಮತಿ ಮೇರೆಗೆ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಇದೇ ರೀತಿ ಅನೇಕ ಮಹಿಳೆಯರಿಗೆ ಕೆಲಸ ಕೊಡಿಸುವುದಾಗಿ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...