ನವದೆಹಲಿ : ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 1000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಖಾಲಿ ಇರುವ ಹುದ್ದೆಗಳಿಗೆ ಜುಲೈ 22 ರಿಂದ ಅರ್ಜಿಗಳು ಪ್ರಾರಂಭವಾಗಿವೆ. 820 ಅಸಿಸ್ಟೆಂಟ್ ಲೋಕೋ ಪೈಲಟ್, 132 ಟೆಕ್ನಿಷಿಯನ್, 64 ಜೂನಿಯರ್ ಎಂಜಿನಿಯರ್ ಹುದ್ದೆಗಳು ಖಾಲಿ ಇವೆ. ಎಲ್ಲಾ ನೇಮಕಾತಿಗಳನ್ನು ಸಾಮಾನ್ಯ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ (ಜಿಡಿಸಿಇ) ಕೋಟಾದಡಿ ಭರ್ತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 42 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಯ ಅಂತಿಮ ಆಯ್ಕೆ ದಾಖಲೆ ಪರಿಶೀಲನೆಯ ನಂತರ ನಡೆಯಲಿದೆ.
ಈ ಹುದ್ದೆಗಳಿಗೆ ಅಗತ್ಯವಿರುವ ದಾಖಲೆಗಳು
– ಆಧಾರ್ ಕಾರ್ಡ್
– ಪ್ಯಾನ್ ಕಾರ್ಡ್
– ಜಾತಿ ಪ್ರಮಾಣಪತ್ರ (ಅನ್ವಯವಾದರೆ)
– ಪಾಸ್ಪೋರ್ಟ್ ಗಾತ್ರದ ಛಾಯಾಚಿತ್ರ
– ಮೊಬೈಲ್ ಸಂಖ್ಯೆ
– ಇಮೇಲ್ ಐಡಿ
ವಿವರವಾದ ಅಧಿಸೂಚನೆಗಳು, ಫಾರ್ಮ್ ಭರ್ತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ ಇಲಾಖೆಯ https://secr.indianrailways.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಸಂಬಳ
ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು ಟೆಕ್ನಿಷಿಯನ್ – ಲೆವೆಲ್ 2 ರ ಪ್ರಕಾರ ಸಂಬಳ
ಜೂನಿಯರ್ ಎಂಜಿನಿಯರ್ – ವೇತನ ಮಟ್ಟ 6 ರ ಪ್ರಕಾರ.